ತುಮಕೂರು : ಮಕ್ಕಳಲ್ಲಿ ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ತುಮಕೂರು ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ಚಿಕ್ಕನಾಯನಹಳ್ಳಿ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈರಾಪುರ ಗ್ರಾಮದ ಜಯರಾಂ ಎಂಬುವರ ಪುತ್ರ ರಾಹುಲ್ (16) ಮೃತಪಟ್ಟ ವಿದ್ಯಾರ್ಥಿ.
ರಾತ್ರಿ 9.30 ರ ಸುಮಾರಿಗೆ ರಾಹುಲ್ ಗ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಹುಳಿಯಾರು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಿಸದೇ ರಾಹುಲ್ ಸಾವನ್ನಪ್ಪಿದ್ದಾನ.ೆ ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.