ತುಮಕೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ವಿಷ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರಿನ ಬಟವಾಡಿಯ ಮಹಾಲಕ್ಷ್ಮಿ ನಗರದ ನಿವಾಸಿ ಅಂಜನಮೂರ್ತಿ (35) ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಂಜನಮೂರ್ತಿ ಅವರಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಯವರು ಬಡ್ಡಿ ಹಣ ಕಟ್ಟುವಂತೆ ಕಿರುಕುಳ ನೀಡಿದ್ದಾರೆ ಎಂಧು ಆರೋಪಿಸಿದ್ದಾರೆ. ವಿಡಿಯೋ ಮಾಡಿ ಅಂಜನಮೂರ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.