ಬೆಂಗಳೂರು : ಕರ್ನಾಟಕ ಆರೋಗ್ಯ ಇಲಾಖೆಯು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಬೆನ್ನುಮೂಳೆ ಸಂಬಂಧಿತ ಶಸ್ತ್ರಚಿಕಿತ್ಸೆಗಳನ್ನು ಅಳವಡಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ.
ಈ ಕುರಿತು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಮಕ್ಕಳಲ್ಲಿ ಮತ್ತು ಯುವಜನರಲ್ಲಿ ಹೆಚ್ಚಾಗಿ ಕಂಡುಬರುವ ಸ್ಕೋಲಿಯೋಸಿಸ್, ಕೈಫೋಸಿಸ್ ಮತ್ತು ಲಾರ್ಡೋಸಿಸ್ ಮುಂತಾದ ಬೆನ್ನುಮೂಳೆ ಸಂಬಂಧಿತ ಸಮಸ್ಯೆಗಳಿಗೆ ಇದರಿಂದ ಪರಿಹಾರ ದೊರಕಲಿದ್ದು ಅವರು ಎಲ್ಲರಂತೆ ದೈನಂದಿನ ಚಟುವಟಿಕೆಗಳಲ್ಲಿ ತೊಡಗಲು ನೆರವಾಗಲಿದೆ. ಮಕ್ಕಳಲ್ಲಿ ಕಂಡುಬರಬಹುದಾದ ಯಾವುದೇ ಆರೋಗ್ಯ ಸಮಸ್ಯೆಗಳನ್ನೂ ಸಹ ಗಂಭೀರವಾಗಿ ಪರಿಗಣಿಸಿ ಅವರಿಗೂ ಸಮಾನ ಆರೋಗ್ಯಯುತ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡಲು ನಮ್ಮ ಆರೋಗ್ಯ ಇಲಾಖೆಯ ಪ್ರಯತ್ನ ನಿರಂತರವಾಗಿದೆ ಎಂದು ತಿಳಿಸಿದ್ದಾರೆ.