ಬೆಂಗಳೂರು : ಇತ್ತೀಚಿಗೆ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.
ಹೌದು ಬೆಂಗಳೂರಿನಲ್ಲಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ವರ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನೇಪಾಳ ಮೂಲದ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ.
ಬಾಲಕಿಯ ತಂದೆ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಬಿಹಾರ್ ಮೂಲದ ಯುವಕನಿಂದ ಈ ಒಂದು ನೀಚ ಕೃತ್ಯ ಎಸಗಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಸದ್ಯ ಆರೋಪಿವನ್ನು ಪೊಲೀಸರು ಈಗ ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.