ಬೆಂಗಳೂರು : ಪ್ರಾಣಿ ಹಾಗೂ ಮಾನವ ಸಂಘರ್ಷಗಳ ನಡುವೆ ಅರಣ್ಯ ಸಂರಕ್ಷಣೆಯಲ್ಲಿ ತೊಡಗಿದ ಅರಣ್ಯ ಸಂಧಿಗಳು ತಮ್ಮ ಪ್ರಾಣವನ್ನು ಲೆಕ್ಕಿಸದೆ ಶ್ರಮಿಸುತ್ತಿರುವ ಅರಣ್ಯ ಸಿಬ್ಬಂದಿಗಳಿಗೆ ಅಪಾಯದ ಭತ್ಯೆ ನೀಡಲು ಹೋರಾಟ ಸರ್ಕಾರ ನಿರ್ಧರಿಸಿದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಈ ಕುರಿತು ಅರಣ್ಯ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವನ್ಯಜೀವಿ ದಾಳಿ ಮತ್ತು ಕಳ್ಳಬೇಟೆಗಾರರ ದಾಳಿಯ ಭೀತಿಯ ನಡುವೆಯೂ ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆ ಮಾಡಲು ಶ್ರಮಿಸುತ್ತಿರುವ ಸಿಬ್ಬಂದಿಗೆ ಅಪಾಯ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.
ಅರಣ್ಯ ಸಿಬ್ಬಂದಿಯ ಬಹು ದಿನಗಳ ಬೇಡಿಕೆಯಾದ ಪೊಲೀಸ್ ಕ್ಯಾಂಟೀನ್ ಮಾದರಿಯ ಕ್ಯಾಂಟೀನ್ ವ್ಯವಸ್ಥೆ ಜಾರಿಗೊಳಿಸಲು ಶ್ರಮಿಸಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನ ಸೆಳೆಯಲಾಗಿದೆ ಎಂದು ಖಂಡ್ರೆ ಹೇಳಿದರು.