ಬೆಂಗಳೂರು : ಯುವತಿ ತನ್ನ ಪ್ರೀತಿ ನಿರಾಕರಿಸಿದ್ದಾಳೆ ಎಂದು ರುಚಿ ಗೆದ್ದ ಪಾಗಲ್ ಪ್ರೇಮಿ ಒಬ್ಬ ಯುವತಿಯ ತಂದೆಗೆ ಸೇರಿದ ಬೈಕ್ ಹಾಗೂ ಕಾರುಗಳಿಗೆ ಬೆಂಕಿ ಹಾಕಿರುವ ಘಟನೆ ಬೆಂಗಳೂರಿನ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸ್ನೇಹಿತರನ್ನು ಕರೆದುಕೊಂಡು ಬೈಕ್ ಹಾಗೂ ಕಾರುಗಳಿಗೆ ಬೆಂಕಿ ಹಚ್ಚಿರುವ ಪಾಗಲ್ ಪ್ರೇಮಿಯನ್ನು ರಾಹುಲ್ ಎಂದು ತಿಳಿದುಬಂದಿದೆ.
ಯುವತಿಯೊಬ್ಬಳನ್ನು ಪಾಗಲ್ ಪ್ರೇಮಿ ರಾಹುಲ್ ಪ್ರೀತಿಸುತ್ತಿದ್ದ. ಪ್ರೀತಿ ನಿರಾಕರಿಸಿದಕ್ಕೆ ರೊಚ್ಚಿಗೆದ್ದು ಕಾರು ಮತ್ತು ಬೈಕುಗಳಿಗೆ ರಾಹುಲ್ ಬೆಂಕಿ ಹಾಕಿದ್ದಾನೆ. ಸ್ನೇಹಿತರನ್ನು ಕರೆದುಕೊಂಡು ಹೋಗಿ ರಾಹುಲ್ ಈ ಕೃತ್ಯ ಎಸಗಿದ್ದಾನೆ. ಈ ವೇಳೆ ತಡೆಯಲು ಬಂದ ಸೆಕ್ಯೂರಿಟಿ ಗಾರ್ಡ್ ಮೇಲು ಕೂಡ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಘಟನೆ ಕುರಿತು ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.