ಮಂಡ್ಯ : ನಾಡಬಾಂಬ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕಂಬದಹಳ್ಳಿಯ ಆಂಜನೇಯ ಬೆಟ್ಟದಲ್ಲಿ ಈ ಒಂದು ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ತಿಳಿದುಬಂದಿದೆ. ಜೈನಬಸದಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಓದುತ್ತಿದ್ದರು.ಬೆಟ್ಟದ ದೇವಸ್ಥಾನದಲ್ಲಿ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ಕೆ ತೆರಳಿದ್ದಾರೆ. ಈ ವೇಳೆ ಕಸದ ರಾಶಿಗೆ ವಿದ್ಯಾರ್ಥಿಗಳು ಕೈ ಹಾಕುತ್ತಿದ್ದಂತೆ ನಾಡ ಬಾಂಬ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಓರ್ವನ ಅಂಗೈ ಚಿತ್ರವಾಗಿದ್ದು ಮತ್ತೊಬ್ಬನ ಮುಖದ ಭಾಗಕ್ಕೆ ತೀವ್ರ ಗಾಯವಾಗಿದೆ. ಕಾಡು ಹಂದಿ ಬೇಟೆಗೆ ನಾಡ ಬಾಂಬ್ ಇಟ್ಟಿರುವ ಶಂಕೆ ಇದೀಗ ವ್ಯಕ್ತವಾಗಿದೆ.