ಬೆಳಗಾವಿ : ಕನ್ನಡ ಮಾತಾಡು ಎಂದಿದ್ದಕ್ಕೆ ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು ನಿನ್ನೆ ಚಿತ್ರದುರ್ಗದಲ್ಲಿ ಮಹಾರಾಷ್ಟ್ರ ಬಸ್ ಚಾಲಕನಿಗೆ ಕನ್ನಡ ಪರ ಕಾರ್ಯಕರ್ತರು ಮಸಿ ಬಳಿದ ನೆಲೆಯಲ್ಲಿ ಕರ್ನಾಟಕಕ್ಕೆ ಮಹಾರಾಷ್ಟ್ರ ಸರ್ಕಾರ ಬಸ್ ಸೇವೆ ಸ್ಥಗಿತಗೊಳಿಸಿದೆ. ಇದರ ಬೆನ್ನಲ್ಲೇ ಕರ್ನಾಟಕ ಕೂಡ ಮಹಾರಾಷ್ಟ್ರಕ್ಕೆ ತೆರಳುವ ಕೆಎಸ್ಆರ್ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಿದೆ.
ಹೌದು ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಲ್ಲಾಪುರಕ್ಕೆ ತೆರಳುವ ಎಲ್ಲಾ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಇದೀಗ ಬಂದ್ ಮಾಡಲಾಗಿದೆ. ನಿಪ್ಪಾಣಿ, ಚಿಕ್ಕೋಡಿ ಹಾಗೂ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ತೆರಳುವ ಎಲ್ಲಾ KSRTC ಬಸ್ ಗಳನ್ನು ಬಂದ್ ಮಾಡಲಾಗಿದೆ.
ಪ್ರತಿದಿನ 120 ಬಸ್ ಗಳ ಸಂಚಾರ ನಡೆಸುತ್ತಿದ್ದ ಸಾರಿಗೆ ಇಲಾಖೆ ಮಧ್ಯಾಹ್ನದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಬಸ್ಗಳ ಸಂಚಾರ ಕೂಡ ಇದೀಗ ಸ್ಥಗಿತಗೊಂಡಿದೆ. ಎಲ್ಲಾ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ ಮಹಾರಾಷ್ಟ್ರ ಸರ್ಕಾರ.