ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರ 119ನೇ ಮನ್ ಕಿ ಬಾತ್ ಸಂಚಿಕೆ ರವಿವಾರ ಪ್ರಸಾರವಾಯಿತು. ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು ಹಲವು ವಿಚಾರಗಳನ್ನು ಹಂಚಿಕೊಂಡರು. ಅದರಲ್ಲೂ ಕರ್ನಾಟಕದ “ಹುಲಿ ಕುಣಿತವನ್ನು” ಪ್ರಧಾನಿ ಮೋದಿ ಅವರು ಇದೆ ವೇಳೆ ಹಾಡಿ ಹೊಗಳಿದ್ದಾರೆ.
ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತದೆ. ಇದು ವಿಶೇಷ ಹಾಗೂ ಗಮನ ಸೆಳೆಯುವ ಕಾರ್ಯಕ್ರಮವಾಗಿದೆ. ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಬಿಆರ್ಟಿ ಅರಣ್ಯವಿದೆ. ಬಿಆರ್ಟಿ ಅರಣ್ಯ ಅತಿಹೆಚ್ಚು ಹುಲಿಗಳಿರುವ ಪ್ರದೇಶವಾಗಿದೆ.
ಹುಲಿಗಳನ್ನು ಉಳಿಸುವುದರಲ್ಲಿ ಸ್ಥಳೀಯ ಸೋಲಿಗರ ಪಾತ್ರ ದೊಡ್ಡದಿದೆ. ಹುಲಿಗಳನ್ನು ಉಳಿಸಿರುವ ಕ್ರೆಡಿಟ್ ಸ್ಥಳೀಯ ಸೋಲಿಗರಿಗೆ ಸಲ್ಲಬೇಕು. ಈಗಲೂ ಪ್ರಾಣಿ-ಮಾನವನ ಸಂಘರ್ಷ ನಡೆಯುತ್ತಲೇ ಇರುತ್ತದೆ. ಆದರೂ ಅದನ್ನು ಕಾಪಾಡಿಕೊಂಡು ಹೋಗಲಾಗುತ್ತಿದೆ ಎಂದು ಅವರು ಹೇಳಿದರು.
ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜಿಗೆ ಮೋದಿ ಕಳವಳ
ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಹಾಗಾಗಿ ಅಡುಗೆಯಲ್ಲಿ ಎಣ್ಣೆಯನ್ನು ಆದಷ್ಟು ಕಡಿಮೆ ಬಳಸುವುದರಿಂದ ಬೊಜ್ಜಿನ ಸಮಸ್ಯೆಯಿಂದ ಪಾರಾಗಬಹುದು ಎಂದು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಸಲಹೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮಾಸಿಕ ರೇಡಿಯೋ ಪ್ರಸಾರ ‘ಮನ್ ಕಿ ಬಾತ್’ ನ 119 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು.ಮಕ್ಕಳಲ್ಲಿ ಬೊಜ್ಜಿನ ಬಗ್ಗೆ ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿ, ಮಕ್ಕಳಲ್ಲಿ ಬೊಜ್ಜು ನಾಲ್ಕು ಪಟ್ಟು ಹೆಚ್ಚಾಗಿದೆ. ಆರೋಗ್ಯದ ಬಗ್ಗೆ ಕಾಳಜಿ ಅವಶ್ಯ ಎಂದು ಹೇಳಿದ್ದಾರೆ.
ದೇಹದ ಬೊಜ್ಜು ಹಲವು ರೋಗಗಳಿಗೆ ಆಹ್ವಾನ ನೀಡುತ್ತದೆ. ಎಂಟು ಜನರ ಪೈಕಿ ಒಬ್ಬರು ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಕ್ಕಳಲ್ಲಿ ಬೊಜ್ಜನ ಸಮಸ್ಯೆ ಶೇ. 4ರಷ್ಟು ಇದೆ. ಶೇ. 10 ಕಡಿಮೆ ಅಡುಗೆ ಎಣ್ಣೆ ಕಡಿಮೆ ಬಳಕೆಯಿಂದ ಬೊಜ್ಜು ತಗ್ಗಿಸಬಹುದು ಎಂದರು.