ಹಾವೇರಿ: ಮಕ್ಕಳಿಗೆ ಯಾವುದೇ ಜಾತಿ-ಭೇದ-ಭಾವವಿಲ್ಲದೇ ಶಿಕ್ಷಣ ನೀಡುವುದೇ ನಮ್ಮ ಸರ್ಕಾರದ ಗುರಿಯಾಗಿದೆ ಅಂತ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಹೇಳಿದ್ದಾರೆ.
ಇಂದು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಳಲಕೊಂಡ ಗ್ರಾಮದ ಎಸ್.ವಿ.ಪಿ ಶಾಲೆಯ ಆವರಣದಲ್ಲಿ ಮೇಕ್ ವೆಲ್ಫೇರ್ ಫೌಂಡೇಶನ್ (MAKE WELFARE FOUNDATION) ವತಿಯಿಂದ ಆಯೋಜಿಸಲಾಗಿದ್ದ “ಅಕ್ಷರೋತ್ಸವ ಸಮಾವೇಶ” ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮಕ್ಕೂ ಮೊದಲು ವಿದ್ಯಾರ್ಥಿಗಳು ತಯಾರಿಸಿದ್ದ ವಿಜ್ಞಾನ ಮಾದರಿ ವಸ್ತು ಪ್ರದರ್ಶನವನ್ನು ವೀಕ್ಷಿಸಿ, ಆವರಿಂದ ಮಾಹಿತಿ ಪಡೆದರು.
ನಂತರ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಹಾಗೂ ಉಪಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಅವರೊಂದಿಗೆ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯಾವುದೇ ಜಾತಿ- ಧರ್ಮ- ಮತಗಳನ್ನು ನೋಡದೇ ಮಕ್ಕಳ ಉಜ್ವಲ ಭವಿಷ್ಯಕ್ಕೆ ಒಳ್ಳೆಯದಾಗುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ಬದ್ಧವಾಗಿದೆ ಎಂದರು.
ಪ್ರತಿಯೊಬ್ಬ ಮಗುವನ್ನು ಮಖ್ಯವಾಹಿನಿಗೆ ಕರೆತರಲು ಶಿಕ್ಷಣದಿಂದ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರನ್ನು ಶಿಕ್ಷಣವಂತರನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ಆರಂಭಗೊಂಡಿರುವ “ಮೇಕ್ ವೇಲ್‌ಫೇರ್ ಫೌಂಡೇಷನ್” ಕಾರ್ಯವು ಎಲ್ಲರಿಗೂ ಮಾದರಿಯಾಗಿದ್ದು, ಹೀಗೆ ಅವರ ಕಾರ್ಯ ಮುಂದುವರೆಯಲಿ ಎಂದು ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಯಾಸೀರ್ ಅಹ್ಮದ್ ಖಾನ್ ಪಠಾಣ, ಮೇಕ್ ವೇಲ್‌ಫೇರ್ ಫೌಂಡೇಷನ್ ವ್ಯವಸ್ಥಾಪಕ ಕೆ.ಎಂ ಮುಸ್ತಫಾ, ಸುಕ್ಷೇತ್ರ ಅಗಡಿ ಮಠದ ಡಾ.ಗುರುಲಿಂಗ ಮಹಾಸ್ವಾಮಿಗಳು ಸೇರಿದಂತೆ ಅನೇಕ ಗಣ್ಯರು, ಮುಖಂಡರು ಹಾಗೂ ಮುದ್ದು ಮಕ್ಕಳು ಉಪಸ್ಥಿತರಿದ್ದರು.
BREAKING: ಬೆಂಗಳೂರಲ್ಲಿ ಕುಡಿಯುವ ನೀರು ಪೋಲು ಮಾಡಿದ 112 ಮಂದಿ ವಿರುದ್ಧ ಕೇಸ್: 5.60 ಲಕ್ಷ ದಂಡ ವಸೂಲಿ
ಹಾವೇರಿಯಲ್ಲಿ ಕೆರೆಗೆ ಕೈಕಾಲು ತೊಳೆಯಲು ಹೋದ ಇಬ್ಬರು ಬಾಲಕರು ನೀರುಪಾಲು