ಬೆಂಗಳೂರು : ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಂದಿನಿ ಶವ ಪತ್ತೆಯಾಗಿದೆ. ಚಾಮರಾಜಪೇಟೆಯಲ್ಲಿ ರಾತ್ರಿ 9:30ಕ್ಕೆ ಈ ಒಂದು ಘಟನೆ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದ ಸ್ಥಿತಿಯಲ್ಲಿ ನಂದಿನಿ ಎನ್ನುವ ಮಹಿಳೆ ಶವ ಪತ್ತೆಯಾಗಿದೆ. ಕೂಡಲೇ ಕುಟುಂಬಸ್ಥರು ನೋಡಿ ನಂದಿನಿ ಮೃತ ದೇಹವನ್ನು ಕೆಳಗೆ ಇಳಿಸಿದ್ದಾರೆ. ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು ಮೃತ ದೇಹವನ್ನು ಕೆಳಗೆ ಇಳಿಸಿದ್ದಾರೆ. ಹಾಗಾಗಿ ಆತ್ಮಹತ್ಯೆ ಮಡಿಕೊಂಡಿರಬಹದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಮೃತ ನಂದಿನಿ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು.ನಂದಿನಿ ಕಳೆದ ಎಂಟು ವರ್ಷದ ಹಿಂದೆ ಸೂರ್ಯ ಎಂಬಾತನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅಲ್ಲದೇ ದಂಪತಿಗಳಿಗೆ ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಕೂಡ ಇತ್ತು. ಆದರೆ ನಂದಿನಿಗೆ ದಿನನಿತ್ಯ ವ್ಯಕ್ತಿಯೋರ್ವ ಕರೆ ಮಾಡಿ ಹಿಂಸೆ ನೀಡುತ್ತಿದ್ದ..
ಈ ಸಂಬಂಧ ಪತ್ನಿ ಹಾಗೂ ಪತಿ ಸೂರ್ಯ ನಡುವೆ ಹಲವಾರು ಬಾರಿ ಗಲಾಟೆ ಕೂಡ ಆಗುತ್ತಿತ್ತು. ಒಂದೆಡೆ ಅನ್ಯ ವ್ಯಕ್ತಿಯಿಂದ ಕಿರುಕುಳ ಇನ್ನೊಂದೆಡೆ ಪತಿಯ ಜೊತೆ ಗಲಾಟೆ ಇವೆರಡರಿಂದ ಬೇಸತ್ತ ನಂದಿನಿ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ನೇಣಿಗೆ ಶರಣಾಗಿದ್ದಾರೆ.ಇದೀಗ ಘಟನೆ ಕುರಿತು ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.