ಬೆಂಗಳೂರು: ನಗರದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಮಹಿಳೆಯರನ್ನು ಅಕ್ರಮವಾಗಿ ಇರಿಸಿಕೊಂಡು ವೇಶ್ಯಾವಾಟಿಕೆಗೆ ತಳ್ಳಲಾಗುತ್ತಿತ್ತು. ಈ ರೀತಿ ವೇಶ್ಯಾವಾಟಿಕೆಗೆ ತಳ್ಳಿದ್ದಂತ ಇಬ್ಬರು ಸಂತ್ರಸ್ತ ಮಹಿಳೆಯರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.
ಬೆಂಗಳೂರಲ್ಲಿ ಸಿ.ಸಿ.ಬಿ ಮಹಿಳಾ ಸಂರಕ್ಷಣಾ ದಳದ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಮಹಿಳೆಯರನ್ನು ಅಕ್ರಮವಾಗಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ, ಇಬ್ಬರು ಸಂತಸ್ತ ಮಹಿಳೆಯರ ರಕ್ಷಣೆ ಮಾಡಲಾಗಿದೆ.
ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಂಕ:18/02/2025 ರಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಬೆಂಗಳೂರು ನಗರ, ಈಶಾನ್ಯ ವಿಭಾಗದ, ಕೋಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಹೊರ ಜಿಲ್ಲೆ/ಹೊರ ರಾಜ್ಯ ದಿಂದ ಇಬ್ಬರು ಮಹಿಳೆಯರನ್ನು ಉದ್ಯೋಗ ಕೊಡಿಸುತ್ತೇನೆಂದು ನಂಬಿಸಿ, ಮಾನವ ಕಳ್ಳ ಸಾಗಣೆಯಲ್ಲಿ ತೊಡಗಿಸಿ, ಮನೆಯಲ್ಲಿರಿಸಿಕೊಂಡು ಇಬ್ಬರಿಗೂ ಹಣದ ಆಮಿಷವೊಡ್ಡಿ, ಮೊಬೈಲ್ ನಂಬರ್‌ಗಳಿಂದ ಪರಿಚಯಸ್ಥ ಗಿರಾಕಿಗಳನ್ನು ಸಂಪರ್ಕಿಸಿ, ಮನೆಗೆ ಬರಮಾಡಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಾ ಅಕ್ರಮ ಹಣ ಸಂಪಾದನೆ ಮಾಡುತ್ತಿರುವ ಬಗ್ಗೆ ಮಾಹಿತಿಯಲ್ಲಿ ತಿಳಿಸಿರುತ್ತಾರೆ.
ಈ ಮಾಹಿತಿಯನ್ನಾದರಿಸಿ ಸಿಸಿಬಿ ಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರುಗಳು ಬಾತ್ಮೀದಾರರು ತಿಳಿಸಿದ ಮನೆಯ ಮೇಲೆ ದಾಳಿ ಮಾಡಿ, ಇಬ್ಬರು ಮಹಿಳೆಯರನ್ನು ಸಂರಕ್ಷಣೆ ಮಾಡಿ, ಆರೋಪಿತೆಯ ವಿರುದ್ಧ ವರದಿಯೊಂದಿಗೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಗೆ ಮುಂದಿನ ಕಾನೂನು ಕ್ರಮ ಜರುಗಿಸುವಂತೆ ನೀಡಲಾಗಿರುತ್ತದೆ.
BREAKING : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಮಾ.31ರವರೆಗೆ ವಿಸ್ತರಣೆ