ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5 ಪ್ರಮುಖ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಕೂಡ ಒಂದು. ಕಾಂಗ್ರೆಸ್ ಸರ್ಕಾರ ರಾಜ್ಯದ ಬಡ ಜನರಿಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುತ್ತಿದ್ದು, ಇದೀಗ ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದೆ. ಒಂದು ವೇಳೆ ಗೃಹಜ್ಯೋತಿ ಯೋಜನೆಗೆ ಸರ್ಕಾರ ಹಣ ನೀಡದೆ ಹೋದರೆ ಗ್ರಾಹಕರಿಂದ ವಸೂಲಿ ಮಾಡಲಾಗುತ್ತದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ ಸ್ಪಷ್ಟನೆ ನೀಡಿದ್ದಾರೆ.
ಹೌದು ಈ ಕುರಿತು ಬೆಂಗಳೂರಿನಲ್ಲಿ ಬೆಸ್ಕಾಂ ಎಂಡಿ ಶಿವಶಂಕರ್ ಸ್ಪಷ್ಟನೆ ನೀಡಿದ್ದು, ಗೃಹಜ್ಯೋತಿ ಯೋಜನೆಗೆ ಮುಂಗಡ ಅನುದಾನ ನಮಗೆ ನೀಡಲಾಗಿದೆ.ಈ ಯೋಜನೆ ಸಂಬಂಧ ನಮ್ಮಲ್ಲಿ ಮುಂಗಡ 50 ಕೋಟಿ ರೂಪಾಯಿ ಇದೆ. ಸರ್ಕಾರ ಮುಂಗಡ ಹಣ ಕೊಡದೆ ಇದ್ದಲ್ಲಿ ಗ್ರಾಹಕರು ಕೊಡಬೇಕು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ ತಿಳಿಸಿದರು.
ಆದರೆ ಸರ್ಕಾರ ನಮಗೆ ಪ್ರತಿ ತಿಂಗಳು ಮುಂಗಡ ಹಣ ಬಿಡುಗಡೆ ಮಾಡುತ್ತಿದೆ.ಹಾಗಾಗಿ ಗ್ರಾಹಕರು ಬಿಲ್ ಪಾವತಿಸಬೇಕಾದ ಪ್ರಮೇಯ ಬರುವುದಿಲ್ಲ. ರಾಜ್ಯ ಸರ್ಕಾರ ಉಚಿತ ಯೋಜನೆಗಳ ಸಬ್ಸಿಡಿ ಹಣ ಕೊಡದೆ ಇದ್ದಲ್ಲಿ ಕೆಇಆರ್‌ಸಿ ನಿಯಮಗಳ ಪ್ರಕಾರ ನಾವು ಹಣ ವಸೂಲಿ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಸ್ಪಷ್ಟನೆ ನೀಡಿದರು.