ಶಿವಮೊಗ್ಗ: ಇಂದು ಸಾಗರ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆ ಕಾವು ಏರಿದೆ. ಚುನಾವಣೆ ಹಿನ್ನೆಲೆಯಲ್ಲಿ ನಗರಸಭೆ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.
ನಗರಸಭೆ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ
ಇಂದಿನ ಸಾಗರ ನಗರಸಭೆ ಚುನಾವಣೆಗೆ ಭದ್ರತೆಗಾಗಿ ಇಬ್ಬರು ಡಿವೈಎಸ್ಪಿ, 07 PI, 12 PSI, 20 ಎಎಸ್ಐ, ಹೆಡ್ ಕಾನ್ಸ್ ಸ್ಟೇಬಲ್, ಪಿಸಿ 115 ಹಾಗೂ 2 KSRP, 3 DAR ತುಕಡಿಯನ್ನು ನಿಯೋಜಿಸಲಾಗಿದೆ.
ಇನ್ನೂ ಭದ್ರತಾ ಕಾರ್ಯದಲ್ಲಿ ಖುದ್ದು ನಿಂತು ಮೇಲುಸ್ತುವಾರಿಯನ್ನು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮಾರೆಡ್ಡಿ ಮಾಡುತ್ತಿದ್ದಾರೆ. ಅವರಿಗೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್, ಸಾಗರ ನಗರ ನಗರ ಠಾಣೆ ಪಿಐ ಪುಲ್ಲಯ್ಯ ರಾಥೋಡ್, ಎಸ್ಐ ನಾಗರಾಜ್ ಸಾಥ್ ನೀಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು