ಕೊಪ್ಪಳ : ರಾಜ್ಯದಲ್ಲಿ ಸಾಲಗಾರರ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ವಿಷ ಸೇವಿಸಿ ಪಡಿತರ ವಿತರಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೆನಕನಹಾಳ ಗ್ರಾಮದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯಂಕಪ್ಪ ಬಂಗಿ (38) ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಿನ್ನೆ ರಾತ್ರಿ ಯಂಕಪ್ಪ ಬಂಗಿ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಯಂಕಪ್ಪ ವಿವಿಧೆಡೆ 20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.