ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳು ಹಾಜರಾಗಿದ್ದು, ವಿಚಾರಣೆಯನ್ನು ಕೋರ್ಟ್ ಏಪ್ರಿಲ್ 8 ಕ್ಕೆ ಮುಂದೂಡಿಕೆ ಮಾಡಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗ್ಲೇ ರೆಗ್ಯುಲರ್ ಬೇಲ್ ಪಡೆದು ಬಿಡುಗಡೆಯಾಗಿರುವ ನಟ ದರ್ಶನ್ ಹಾಗೂ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಸೇರಿದಂತೆ ಎಲ್ಲ ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಇಂದು ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ವಿಚಾರಣೆ ನಡೆಸಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ವಿಚಾರಣೆ ಏಪ್ರಿಲ್ 8 ಕ್ಕೆ ಕ್ಕೆ ಮುಂದೂಡಿ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಆದೇಶ ಹೊರಡಿಸಿದೆ.