ಮಹಾರಾಷ್ಟ : ಕುಂಭಮೇಳದಿಂದ ಹಿಂದಿರುಗುವಾಗ ಭೀಕರ ಅಪಘಾತ ಸಂಭವಿಸಿದ್ದು, ಬೀದರ್ ಜಿಲ್ಲೆಯ ಇಬ್ಬರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ದರ್ಗಾ ಬಳಿ ಟಿಟಿ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನಪ್ಪಿದ್ದಾರೆ. ಬೀದರ್ ನ ಓಲ್ಡ್ ಸಿಟಿ ದರ್ಜಿ ಗಲ್ಲಿಯ ಇಬ್ಬರು ಸ್ಥಳದಲ್ಲಿ ದುರ್ಮರಣ ಹೊಂದಿದ್ದಾರೆ.
ಟೆಂಪೋ ಟ್ರಾವೆಲರ್ ನಲ್ಲಿ ಕುಂಭಮೇಳಕ್ಕೆ ಹೋಗಿ ವಾಪಸ್ ಬರುವಾಗ ಈ ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿ 14 ಜನರಿಗೆ ಗಂಭೀರವಾಗಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐದು ದಿನಗಳ ಹಿಂದೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ತೆರಳಿದ್ದರು.
ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಬಳಿಕ ಕಾಶಿ, ಅಯೋಧ್ಯೆಗೆ ಭೇಟಿ ನೀಡಿದ್ದರು. ಇಂದು ವಾಪಾಸ್ ಬರುವಾಗ ಟಿಟಿ ಚಾಲಕನ ನಿರ್ಲಕ್ಷದಿಂದ ಬೆಳಿಗ್ಗೆ ಅಪಘಾತವಾಗಿದೆ. ಟಿಟಿಯಲಿದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದು 14 ಜನರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇತ್ತೀಚೆಗೆ ತಾನೇ ಬೀದರ್ ನಗರದ ಒಂದೇ ಕುಟುಂಬದ 6 ಜನರು ಉತ್ತರ ಪ್ರದೇಶಕ್ಕೆ ಪ್ರಯಾಗ್ ರಾಜ್ ಗೆ ತೆರಳುವ ವೇಳೆ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದರು. ನಿನ್ನೆ ಮೃತದೇಹಗಳನ್ನು ಬೀದರ್ ನಗರಕ್ಕೆ ತಂದು ಕುಟುಂಬದ ಸಮುಖದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಅಪಘಾತ ಸಂಭವಿಸಿ ಇಬ್ಬರು ಸಾವನಪ್ಪಿದ್ದಾರೆ.








