ಉಡುಪಿ : ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗಿದ್ದ ಆರು ಮಂದಿ ನಕ್ಸಲರ ಪೈಕಿ ನಾಲ್ವರನ್ನು ವಶಕ್ಕೆ ಪಡೆದಿರುವ ಕಾರ್ಕಳ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನಾಲ್ವರು ನಕ್ಸಲರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕಾರ್ಕಳ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ.
ಕಾರ್ಕಳ- ಹೆಬ್ರಿಯ 15 ಪ್ರಕರಣಗಳ ಕುರಿತು ತನಿಖೆ ನಡೆಸಲು ಮಾರಪ್ಪ(ಜಯಣ್ಣ), ಮುಂಡಗಾರು ಲತಾ, ವನಜಾಕ್ಷಿ(ಜ್ಯೋತಿ), ಸುಂದರಿ(ಗೀತಾ, ಜೆನ್ನಿ) ಎಂಬವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ವಶಕ್ಕೆ ಪಡೆದಿದ್ದಾರೆ.ಕಾರ್ಕಳ ಜೆಎಂಎಫ್ಸಿ ನ್ಯಾಯಾಲಯ ನಾಲ್ವರು ನಕ್ಸಲರನ್ನು 5 ದಿನ ಪೊಲೀಸರ ವಶಕ್ಕೆ ನೀಡಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದ ಕಾರಾಗೃಹದಿಂದ ಇವರನ್ನು ಕಾರ್ಕಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಕಳೆದ ಜನೆವರಿ 8 ರಂದು ಆರು ಮಂದಿ ನಕ್ಸಲರು ಜ.8ರಂದು ಶರಣಾಗಿದ್ದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯನವರ ಎದುರು ಶರಣಾಗಿದ್ದ ನಕ್ಸಲರಿಗೆ ಹೂಗುಚ್ಛ ಹಾಗೂ ಸಂವಿಧಾನ ಪುಸ್ತಕ ನೀಡಿ ಸ್ವಾಗತಿಸಲಾಗಿತ್ತು.