ಬೆಂಗಳೂರು: ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳಲು ಕೆ ಎಸ್ ಆರ್ ಟಿಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.
ಈ ಬಗ್ಗೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ದಿನಾಂಕ 01-03-2025ರಿಂದ20-03-2025ರವರೆಗೆ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ದಿನಾಂಕ 21-03-2025ರಿಂದ04-04-2025ರವರೆಗೆ ನಡೆಯಲಿದೆ ಎಂದಿದೆ.
ಕ.ರಾ.ರ.ಸಾ ನಿಗಮವು, ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, “ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ಕೋರಿದೆ.
MES ಪುಂಡರು ಕನ್ನಡಿಗರ ತಂಟೆಗೆ ಬಂದ್ರೆ ಸರಿ ಇರಲ್ಲ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
BREAKING : ಬಾಲಿವುಡ್ ನಟ ‘ಗೋವಿಂದ’ 37 ವರ್ಷಗಳ ದಾಂಪತ್ಯದಲ್ಲಿ ಬಿರುಕು ; ವಿಚ್ಛೇದನಕ್ಕೆ ಮುಂದಾದ ದಂಪತಿ