ಉಡುಪಿ : ಉಡುಪಿಯಲ್ಲಿ ಘೋರವಾದ ಘಟನೆ ನಡೆದಿದ್ದು ಅಪಾರ್ಟ್ಮೆಂಟ್ ಒಂದರ 14ನೇ ಮಹಡಿಯಿಂದ ಜಿಗಿದು ಯುವಕನೂರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ನಗರದ ಬ್ರಹ್ಮಗಿರಿ ಎಂಬಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ಮೃತ ಯುವಕನನ್ನು ಲೇಕ್ ರಾಜ್ (29) ಎಂದು ತಿಳಿದುಬಂದಿದೆ. ಉಡುಪಿಯ ಬ್ರಹ್ಮಗಿರಿಬಳಿ ಇರುವ ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್ಮೆಂಟ್ ನಲ್ಲಿ ಈ ಒಂದು ದುರಂತ ಸಂಭವಿಸಿದೆ.ಆತ್ಮಹತ್ಯೆ ಮಾಡಿಕೊಂಡ ಯುವಕ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣೆ ಪೋಲಿಸರು ಭೇಟಿ ನೀಡಿದ್ದು, ಆತ್ಮಹತ್ಯೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.