ಹಾವೇರಿ : ಹಾವೇರಿಯಲ್ಲಿ ಭೀಕರವಾದ ಅಪಘಾತ ನಡೆದಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಹಾವೇರಿ ತಾಲೂಕಿನ ಮೇವುಂಡಿ ಗ್ರಾಮದ ಬಳಿ ನಡೆದಿದೆ.
ಘಟನೆಯಲ್ಲಿ ಅದೃಷ್ಟವಶಾತ್ ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಿಂದ ರಾಣೇಬೆನ್ನೂರು ಕಡೆಗೆ ಹೊರಟಿತ್ತು.
ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದ ಸುಮಾರು 20 ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.