ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಳಿಜೋಳ ಬೆಳೆಗಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಸುವುದಾಗಿ ಘೋಷಿಸಿದೆ.
ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ. ಜಿಲ್ಲಾ ಟಾಸ್ಕ್‌ಫೋರ್ಸ್‌ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.
ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ. ಜಿಲ್ಲಾ ಟಾಸ್ಕ್‌ಫೋರ್ಸ್‌ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ… pic.twitter.com/240NpTKPcR
— DIPR Karnataka (@KarnatakaVarthe) February 25, 2025
ರೈತಬಾಂಧವರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಬಿಳಿಜೋಳವನ್ನು ಮಾರಾಟ ಮಾಡದೇ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.
ಬೆಂಬಲ ಬೆಲೆ ಎಷ್ಟು?
ಹೈಬ್ರಿಡ್ ಜೋಳ ಪ್ರತಿ ಕ್ವಿಂಟಾಲ್ ಗೆ ರೂ.3371
ಮಾಲ್ದಂಡಿ ಜೋಳ ಪ್ರತಿ ಕ್ವಿಂಟಾಲ್ ಗೆ ರೂ.3421
ಪ್ರತಿ ಎಕರೆಗೆ ನಿಗದಿಪಡಿಸಿರುವ ಪ್ರಮಾಣ 20 ಕ್ವಿಂಟಾಲ್
ಪ್ರತಿ ರೈತರಿಂದ ಖರೀದಿ ಪ್ರಮಾಣ 150 ಕ್ವಿಂಟಾಲ್
ಮಾರಾಟ ಹೇಗೆ.?
ಬಿಳಿಜೋಳ ಬೆಳಗಾರರು ಪ್ರೂಟ್ಸ್ ಐಡಿಯೊಂದಿಗೆ ಬಯೋಮೆಟ್ರಿಕ್ ನೀಡಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆಧಾರ್ ಜೋಡಣೆಯಾದ ಎನ್ ಸಿ ಪಿ ಐ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಖಾತರಿ ಪಡಿಸಬೇಕು. ಎಫ್ ಎ ಕ್ಯೂ ಗುಣಮಟ್ಟದ ಬಗ್ಗೆ ಗ್ರೇಡರ್ ಪರಿಶೀಲಿಸಿ ದೃಢೀಕರಿಸಿದ ನಂತ್ರ ಖರೀದಿಸಲಾಗುತ್ತದೆ.
ಹಣ ಪಾವತಿ ಹೇಗೆ.?
ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ನೇರವಾಗಿ ಜಮೆ ಮಾಡಲಾಗುತ್ತದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ 18004251552ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡಗೆ ದೆಹಲಿ, ಮುಂಬೈಗೆ ತೆರಳಲು ಕೋರ್ಟ್ ಅನುಮತಿ