ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಈ ವರ್ಷದ ಮೊದಲ ಬಲಿಯಾಗಿದೆ. 54 ವರ್ಷದ ಮಹಿಳೆ ಕೆಎಫ್ ಡಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ತೀರ್ಥಹಳ್ಳಿ ತಾಲೂಕನ ಕೊನೇರಿಪುರ ಗ್ರಾಮದ ಮಹಿಳೆಯೊಬ್ಬರು ಹಲವು ದಿನಗಳಿಂದ ಕೆಎಫ್‌ಡಿ ಸೋಂಕಿಂದ ಬಳಲುತ್ತಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಜ.23ರಂದು ಮಹಿಳೆಗೆ ಕೆಎಫ್‌ಡಿ ಪಾಸಿಟಿವ್ ಬಂದಿತ್ತು. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಸುಧಾರಣೆ ಕಾಣದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಜ.29ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಮತ್ತೆ ಕೆಎಫ್‌ಡಿ ರೋಗದ ಲಕ್ಷಣ ಕಂಡುಬಂದ ಹಿನ್ನೆಲೆ ಫೆ.5ರಂದು ಪುನಃ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸಂದಿಸದೇ ಮಹಿಳೆ ಮೃತಪಟ್ಟಿದ್ದಾರೆ.