ಬೆಂಗಳೂರು ; ಬೆಂಗಳೂರಿನಲ್ಲಿ ಎರಡೂವರೆ ವರ್ಷದ ಹಿಂದೆ ನಿವೃತ್ತ ಶಿಕ್ಷಕಿ ಪ್ರಸನ್ನಕುಮಾರಿ ಕೊಲೆ ಪ್ರಕರಣ ಸಂಬಂಧ ಇದೀಗ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ತಿರುಪತಿಯಲ್ಲಿ ಬಂಧಿಸಿದ್ದಾರೆ.
ಬೆಂಗಳೂರಿನ ಅಂಬಾಭವಾನಿ ಲೇಔಟ್‌ನಲ್ಲಿ ನಡೆದಿದ್ದ ನಿವೃತ್ತ ಶಿಕ್ಷಕಿ ಎಸ್.ಪ್ರಸನ್ನಕುಮಾರಿ (68) ಕೊಲೆ ಬಳಿಕ ತಿರುಪತಿಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಇರ್ಫಾನ್ ನನ್ನು ಪೊಲೀಸರು ಬಂಧಿಸಿದ್ದಾರೆ. 2022 ರಲ್ಲಿ ನವೋದಯ ಶಾಲೆಯ ನಿವೃತ್ತ ಶಿಕ್ಷಕಿ ಪ್ರಸನ್ನಕುಮಾರಿಯನ್ನು ಕೊಲೆ ಮಾಡಲಾಗಿತ್ತು.
ಕೊಲೆ ಪ್ರಕರಣ ಸಂಬಂಧ ಮೃತರ ಮನೆ ಸಮೀಪದ ನಿವಾಸಿ ಸೇರಿದಂತೆ ಇಬ್ಬರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದು. ವಿಚಾರಣೆಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಇರ್ಫಾನ್ ತಲೆಮರೆಸಿಕೊಂಡಿದ್ದ. ಇದೀಗ ಎರಡೂವರೆ ವರ್ಷದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.