ಗಂಗಾವತಿ : ಇತ್ತೀಚಿಗೆ ತಾನೇ ಬೆಳಗಾವಿಯಲ್ಲಿ ಕನ್ನಡದಲ್ಲಿ ಮಾತನಾಡಿ ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಮಹಾರಾಷ್ಟ್ರದ ಪುಂಡರು ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಈಗ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಸ್ ಟಿಕೆಟ್ ದರ ಹೆಚ್ಚಾಗಿದ್ದಕ್ಕೆ ಪ್ರಯಾಣಿಕಂಬ್ಬ ಕೂಡಿದ ಮತ್ತಿನಲಿ ಕಂಡಕ್ಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಹೌದು ಪ್ರಯಾಣಿಕನಿಂದ ಸರ್ಕಾರಿ ಕಂಡಕ್ಟರ್ ಮೇಲೆ ಹಲ್ಲೆ ನಡೆದಿದೆ. ಬಸ್ ಕಂಡಕ್ಟರ್ ಹನುಮಂತ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದಾಗಿ ಕಂಡಕ್ಟರ್ ಬಲಭಾಗದ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ. ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಕುಡಿದ ಮತ್ತಿನಲ್ಲಿ ಪ್ರಯಾಣಿಕ ಶ್ರೀಧರ್ ಎಂಬಾತ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಬಸ್ ಟಿಕೆಟ್ ದರ ಯಾರನ್ನು ಕೇಳಿ ಜಾಸ್ತಿ ಮಾಡಿದ್ದೀರಾ ಎಂದು ಕೂಗಾಡಿ ಹಲ್ಲೆ ಮಾಡಿದ್ದಾನೆ. ಕೂಡಲೇ ಗಂಗಾವತಿ ಪೊಲೀಸರು ಆರೋಪಿ ಶ್ರೀಧರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.