ಚಿಕ್ಕಬಳ್ಳಾಪುರ : ಇಂದು ಎಲ್ಲೆಡೆ ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಮಹಾಶಿವರಾತ್ರಿಯ ಅಂಗವಾಗಿ ಚಿಕ್ಕಬಳ್ಳಾಪುರದಲ್ಲಿರುವ ಆದಿಯೋಗಿ ಶಿವನ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶಿವನ ದರ್ಶನ ಪಡೆಯುತ್ತಿದ್ದಾರೆ ಆದರೆ ಇದೆ ಆದಿಯೋಗಿ ದರ್ಶನ ಪಡೆದು ಹಿಂದಿರುಗುವಾಗ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿರುವ ಘಟನೆ ನಡೆದಿದೆ.
ಹೌದು ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬ್ರಿಡ್ಜ್ ಬಳಿ ದುರ್ಘಟನೆ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನೇಪಾಳ ಮೂಲದ ಸುನಿಲ್ ಬಿಸ್ತೂರಿ ಹಾಗೂ ಕುಜಲ್ ಭಂಡಾರಿ ಮೃತ ಯುವಕರು ಎಂದು ತಿಳಿದು ಬಂದಿದೆ.
ಮೃತ ಯುವಕರು ಬೆಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಈ ಇಬ್ಬರು ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬೈಕ್ ನಲ್ಲಿದ್ದ ಸುನಿಲ್ ಬಿಸ್ತೋರಿ ಹಾಗೂ ಕುಜಲ್ ಭಂಡಾರಿ ದುರ್ಮರಣ ಹೊಂದಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.