ಬೆಂಗಳೂರು: ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಹೊಸದಾಗಿ 5,800 ಬಸ್ ಸೇರ್ಪಡೆಗೆ ಅನುಮೋದನೆ ನೀಡಲಾಗಿದೆ ಅಂತ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ ಎಂದಿದ್ದಾರೆ.
ಹೊಸದಾಗಿ 5,800 ಬಸ್‌ಗಳ ಸೇರ್ಪಡೆಗೆ ಅನುಮೋದನೆ ನೀಡಲಾಗಿದ್ದು, ಈವರೆಗೆ 4,891 ಹೊಸ ಬಸ್‌ಗಳನ್ನು ಖರೀದಿಸಲಾಗಿದೆ. ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ. ಹೊಸದಾಗಿ 5,800 ಬಸ್‌ಗಳ ಸೇರ್ಪಡೆಗೆ ಅನುಮೋದನೆ ನೀಡಲಾಗಿದ್ದು, ಈವರೆಗೆ 4,891 ಹೊಸ ಬಸ್‌ಗಳನ್ನು ಖರೀದಿಸಲಾಗಿದೆ.
ಈ ಮೂಲಕ… pic.twitter.com/qHr5YxJBjY
— DIPR Karnataka (@KarnatakaVarthe) February 26, 2025
BIG NEWS: ಶಿಕ್ಷೆಗೊಳಗಾದ ಶಾಸಕರಿಗೆ ‘ಆಜೀವ ನಿಷೇಧ’ ಹೇರುವುದು ‘ಕಠಿಣ’: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ
BREAKING : ಮೈಸೂರಲ್ಲಿ ಮತ್ತೊಂದು ಅಗ್ನಿ ದುರಂತ : ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ 12 ಬಾಯ್ಲರ್ ಗಳು!