ಬೆಂಗಳೂರು: 2013ರಲ್ಲಿ ನಾನು ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೆ ಕಳೆದ ಚುನಾವಣೆಯಲ್ಲಿ ಪಕ್ಷದ ಅದ್ಯಕ್ಷನಾಗಿದ್ದೆ. ಈಗ ಡಿಸಿಎಂ ಆಗಿದ್ದೇನೆ. ನನಗಿರುವ ಸಾಮರ್ಥ್ಯ, ಅನುಭವ ಬಳಸಿಕೊಳ್ಳಬೇಕು. ಸಿದ್ದರಾಮಯ್ಯ ಅವರು ಕೂಡ ಪಕ್ಷವನ್ನು ಮುನ್ನಡೆಸಲಿದ್ದಾರೆ. ಅವರು ಎರಡು ಅವಧಿಗೆ ವಿರೋಧ ಪಕ್ಷದ ನಾಯಕರಾಗಿ, ಎರಡು ಅವಧಿಗೆ ಸಿಎಂ ಆಗಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ನಾವು ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ನಿಮ್ಮ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎಂಬ ಹೇಳಿಕೆ ನಂತರ ಚರ್ಚೆ ಹೆಚ್ಚಾಗಿದೆ ಎಂದು ಕೇಳಿದಾಗ, “ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ ಬೆಳೆಸಿದೆ. ಐದು ವರ್ಷ ನನ್ನನ್ನು ಪಕ್ಷ ಅಧ್ಯಕ್ಷನನ್ನಾಗಿ ಮಾಡಿ, ಈಗ ಡಿಸಿಎಂ ಹುದ್ದೆ ನೀಡಿದೆ. ಇಷ್ಟಾದ ಮೇಲೆ ನಾನು ನನ್ನ ಮುಖ ತೋರಿಸಿ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡದಿದ್ದರೆ ನನ್ನ ನಾಯಕತ್ವ ನೀಡದಿದ್ದರೆ ಹೇಗೆ? ನಾನು ಮನೆಯಲ್ಲಿ ಕೂರಲು ಕಾಂಗ್ರೆಸ್ ಪಕ್ಷ ನನಗೆ ಇಷ್ಟು ಶಕ್ತಿ ನಿಡಿದೆಯೇ? ನಾನು ಯಾವುದೇ ಹುದ್ದೆಯಲ್ಲಿದ್ದರೂ ನಾನು ಪಕ್ಷ ಮುನ್ನಡೆಸಬೇಕು. ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ದೆಹಲಿ, ಅಸ್ಸಾಂ, ಬಿಹಾರ, ಹಿಮಾಚಲ ಪ್ರದೇಶಕ್ಕೆ ನನ್ನನ್ನು ಕರೆಯುತ್ತಾರೆ ಎಂದರು.
2013ರಲ್ಲಿ ನಾನು ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೆ ಕಳೆದ ಚುನಾವಣೆಯಲ್ಲಿ ಪಕ್ಷದ ಅದ್ಯಕ್ಷನಾಗಿದ್ದೆ. ಈಗ ಡಿಸಿಎಂ ಆಗಿದ್ದೇನೆ. ನನಗಿರುವ ಸಾಮರ್ಥ್ಯ, ಅನುಭವ ಬಳಸಿಕೊಳ್ಳಬೇಕು. ಸಿದ್ದರಾಮಯ್ಯ ಅವರು ಕೂಡ ಪಕ್ಷವನ್ನು ಮುನ್ನಡೆಸಲಿದ್ದಾರೆ. ಅವರು ಎರಡು ಅವಧಿಗೆ ವಿರೋಧ ಪಕ್ಷದ ನಾಯಕರಾಗಿ, ಎರಡು ಅವಧಿಗೆ ಸಿಎಂ ಆಗಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ನಾವು ಮುಂದೆ ಸಾಗುತ್ತೇವೆ” ಎಂದು ತಿಳಿಸಿದರು.
BIG NEWS : ಫೆ.28ರಿಂದ 3 ದಿನ `ಹಂಪಿ ಉತ್ಸವ’ : CM ಸಿದ್ದರಾಮಯ್ಯ ಚಾಲನೆ.!
BREAKING : ಮೈಸೂರಲ್ಲಿ ಮತ್ತೊಂದು ಅಗ್ನಿ ದುರಂತ : ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ 12 ಬಾಯ್ಲರ್ ಗಳು!