ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ ಸಿಕ್ಕಿದೆ. ಈವರೆಗೆ 400 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣವನ್ನು ಸಾರಿಗೆ ಬಸ್ಸುಗಳಲ್ಲಿ ಬೆಳೆಸಿದ್ದಾರೆ. ಶಕ್ತಿ ಯೋಜನೆ ಜಾರಿಗೊಂಡ ಬಳಿಕ 1,54,955 ಟ್ರಿಪ್ ಗಳ ಪ್ರಮಾಣವು 1,76,787ಕ್ಕೆ ಹೆಚ್ಚಳವಾಗಿದೆ.
ಶಕ್ತಿ ಯೋಜನೆ ನಾಡಿನ ಮಹಿಳೆಯರಿಗೆ ಮಾತ್ರವಲ್ಲ ಸಾರಿಗೆ ಸಂಸ್ಥೆಗಳಿಗೂ ವರದಾನವಾಗಿದೆ. ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದ್ದು, ಈ ಹಿನ್ನೆಲೆ ಹೊಸದಾಗಿ ಬಸ್‌ಗಳನ್ನು ಖರೀದಿಸುವ ಜೊತೆಗೆ ಟ್ರಿಪ್‌ಗಳ ಪ್ರಮಾಣವು ಹೆಚ್ಚಳ ಮಾಡಲಾಗಿದೆ.
ಶಕ್ತಿ ಯೋಜನೆ ಜಾರಿಗೆ ಮುನ್ನ ಪ್ರತಿದಿನ ಕಾರ್ಯಾಚರಣೆಗೊಳಿಸುತ್ತಿದ್ದ 1,54,955 ಟ್ರಿಪ್‌ಗಳ ಪ್ರಮಾಣವು 1,76,787 ಕ್ಕೆ ಜಾಸ್ತಿಯಾಗಿದೆ. ಪ್ರತಿದಿನ 21,832 ಹೆಚ್ಚುವರಿ ಟ್ರಿಪ್‌ಗಳ ಕಾರ್ಯಾಚರಣೆಯಾಗುತ್ತಿದೆ.
ಈ ಮೂಲಕ ನಾಡಿನ ಮಹಿಳೆಯರಿಗೂ ಅನುಕೂಲವಾಗಿರುವ, ಸಾರಿಗೆ ಸಂಸ್ಥೆಗಳಿಗೂ ಲಾಭ ತಂದುಕೊಡುತ್ತಿರುವ ಶಕ್ತಿ ಯೋಜನೆ ರಾಜ್ಯದಲ್ಲಿ ಸಂಪರ್ಕ ಕ್ರಾಂತಿ ಸೃಷ್ಟಿಸಿದೆ ಅಂತ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಶಕ್ತಿ ಯೋಜನೆ ನಾಡಿನ ಮಹಿಳೆಯರಿಗೆ ಮಾತ್ರವಲ್ಲ ಸಾರಿಗೆ ಸಂಸ್ಥೆಗಳಿಗೂ ವರದಾನವಾಗಿದೆ. ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದ್ದು, ಈ ಹಿನ್ನೆಲೆ ಹೊಸದಾಗಿ ಬಸ್‌ಗಳನ್ನು ಖರೀದಿಸುವ ಜೊತೆಗೆ ಟ್ರಿಪ್‌ಗಳ ಪ್ರಮಾಣವು ಹೆಚ್ಚಳ ಮಾಡಲಾಗಿದೆ.
ಶಕ್ತಿ ಯೋಜನೆ ಜಾರಿಗೆ ಮುನ್ನ ಪ್ರತಿದಿನ ಕಾರ್ಯಾಚರಣೆಗೊಳಿಸುತ್ತಿದ್ದ… pic.twitter.com/iNCt3Y5gDW
— DIPR Karnataka (@KarnatakaVarthe) February 26, 2025
BREAKING: ಬೆಂಗಳೂರಲ್ಲಿ ಪೊಲೀಸ್ ಠಾಣೆಯಲ್ಲೇ ಪಿನಾಯಿಲ್ ಕುಡಿದು ಆರೋಪಿ ಆತ್ಮಹತ್ಯೆಗೆ ಯತ್ನ
BIG NEWS : ಫೆ.28ರಿಂದ 3 ದಿನ `ಹಂಪಿ ಉತ್ಸವ’ : CM ಸಿದ್ದರಾಮಯ್ಯ ಚಾಲನೆ.!