ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳೋದಕ್ಕೆ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.
ಹೌದು ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್.1ರಿಂದ 20ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್.21ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಪರೀಕ್ಷೆಗೆ ತೆರಳೋದಕ್ಕೆ ಸಾರಿಗೆ ಬಸ್ಸುಗಳಲ್ಲಿ ವಿದ್ಯಾರ್ಥಿಗಳಿಗೆ ಫ್ರೀ ಆಗಿದೆ.
ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಪರೀಕ್ಷೆ ಪ್ರವೇಶ ಪತ್ರ ತೋರಿಸಿ, ಸಾರಿಗೆ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04ರ ವರೆಗೆ ನಡೆಯಲಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ… pic.twitter.com/x0foqvFsG4
— DIPR Karnataka (@KarnatakaVarthe) February 26, 2025
‘ಶಕ್ತಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: 1,54,955 ಟ್ರಿಪ್ ಗಳ ಪ್ರಮಾಣವು 1,76,787ಕ್ಕೆ ಹೆಚ್ಚಳ | Shakti Scheme
BREAKING : ಮೈಸೂರಲ್ಲಿ ಮತ್ತೊಂದು ಅಗ್ನಿ ದುರಂತ : ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ 12 ಬಾಯ್ಲರ್ ಗಳು!