ಬೆಂಗಳೂರು: ಪ್ರತಿಭಟನಾ ನಿರತ ಎನ್ ಹೆಚ್ ಎಂ ಶುಶ್ರೂಷಾಧಿಕಾರಿಗಳ ಜೊತೆಗೆ ನಾವಿದ್ದೇವೆ. ನೀವು ಇದ್ದರೇ ವೈದ್ಯಕೀಯ ಸೇವೆ ಸುಗಮವಾಗಿ ನಡೆಯಲಿದೆ ಅಂತ ಸಂಸದ ಡಾ.ಸಿಎನ್ ಮಂಜುನಾಥ್ ತಿಳಿಸಿದ್ದಾರೆ.
ನಗರದ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಡಿ ನಡೆಸುತ್ತಿರುವಂತ ಪ್ರತಿಭಟನಾ ಸ್ಥಳಕ್ಕೆ ಭೇಟಿಯಾಗಿ, ನೌಕರರ ಕಷ್ಟವನ್ನು ಆಲಿಸಿದರು.
ಆ ಬಳಿಕ ಸಂಸದ ಡಾ. ಮಂಜುನಾಥ್ ಅವರು ಮಾತನಾಡಿ, ನಾವು ನಿಮ್ಮ ಜೊತೆ ಇದ್ದೇವೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಿಸುವುದು, ಖಾಯಂ ಮಾಡುವ ಬಗ್ಗೆ ಒತ್ತಾಯಿಸುತ್ತೇವೆ. ನರ್ಸ್‍ಗಳು, ತಂತ್ರಜ್ಞರು ಸೇರಿ ವೈದ್ಯೇತರ ಸಿಬ್ಬಂದಿ ಅತ್ಯಂತ ಅನಿವಾರ್ಯ ಎಂದು ತಿಳಿಸಿದರು.
ಗುತ್ತಿಗೆ ಶುಶ್ರೂಷಾಧಿಕಾರಿಗಳ ಬೇಡಿಕೆ ಸದನದಲ್ಲಿ ಪ್ರಸ್ತಾಪ: ಪರಿಷತ್ ವಿಪಕ್ಷನಾಯಕ ಛಲವಾದಿ ನಾರಾಯಣಸ್ವಾಮಿ
BIG NEWS : ಫೆ.28ರಿಂದ 3 ದಿನ `ಹಂಪಿ ಉತ್ಸವ’ : CM ಸಿದ್ದರಾಮಯ್ಯ ಚಾಲನೆ.!