ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಸಮೀಪ ವ್ಯಕ್ತಿಯೊಬ್ಬರು ಸರ್ಕಾರಿ ಬಸ್ ಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ತಾಲೂಕಿನ ತೂಬಿನಕೆರೆ ಗ್ರಾಮದ ಅರುಣ್ (23) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಬುಧವಾರ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ ಸಮೀಪದ ಹೆದ್ದಾರಿ ವಿಭಜಕದ ಮೇಲೆ ಕುಳಿತ್ತಿದ್ದರು. ಈ ವೇಳೆ ಮದ್ದೂರಿನಿಂದ ಕೆಸ್ತೂರು ಕಡೆಗೆ ಹೋಗುತ್ತಿದ್ದ ಸರ್ಕಾರಿ ಸಾರಿಗೆಯ ಹಿಂಬದಿ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅರುಣ್ ಅವರು ಆತ್ಮಹತ್ಯೆ ಮಾಡಿಕೊಂಡರಾ, ಇದು ರಸ್ತೆ ಅಪಘಾತದಿಂದಾದ ಸಾವಾ ಎಂಬುವುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.