ಧರ್ಮಸ್ಥಳ : ಚಾರ್ಮಾಡಿ ಘಾಟಿಯಲ್ಲಿ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನ ಸ್ಟೇರಿಂಗ್ ಕಟ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿದೆ.
ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನ ಸ್ಟೇರಿಂಗ್ ಏಕಾಏಕಿ ಕಟ್ ಆಗಿದ್ದು, ಕೂಡಲೇ ಚಾಲಕ ಸಮಯ ಪ್ರಜ್ಞೆ ಮೆರೆದು ರಸ್ತೆ ಬದಿಗೆ ಬಸ್ ನಿಲ್ಲಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸಂಸ್ಥೆ ಸರಿಯಾಗಿ ಬಸ್ ನಿರ್ವಹಣೆ ಮಾಡುತ್ತಿಲ್ಲ ಘಟನೆ ಬಳಿಕ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.