ಬೆಂಗಳೂರು: ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದಂತ ಆರೋಪದಲ್ಲಿ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಹೆಚ್ ಎಸ್ ಠಾಣೆಯ ಪೊಲೀಸರು ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದಂತ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಮಗ ವಿಷ್ಣು ಭಟ್ ಎಂಬುವರನ್ನು ಬಂಧಿಸಿದ್ದಾರೆ.
ಕಳೆದ ಫೆಬ್ರವರಿ 7ರಂದು ಹೋಟೆಲ್ ಬಳಿ ಗಲಾಟೆ ಮಾಡಿದ್ದರು. ಆ ಬಳಿಕ ಫೆಬ್ರವರಿ 26ರ ನಿನ್ನೆ ಕೂಡ ಹೋಟೆಲ್ ಬಳಿಗೆ ಬಂದು ವಿನಾಕಾರಣ ಜಗಳಕ್ಕೆ ಇಳಿದಿದ್ದರು. ಜಗಳದ ವೇಳೆಯಲ್ಲೇ ಕಬ್ಬಿಣದ ವಸ್ತುವಿನಿಂದ ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದರು.
ಈ ಘಟನೆ ಸಂಬಂಧ ಹೋಟೆಲ್ ಸಿಬ್ಬಂದಿ ಹೆಚ್ ಎಸ್ ಆರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಭೀಮಾ ಜ್ಯೂವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಷ್ಣು ಭಟ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ.
BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ನೋಂದಣಿ ಕುರಿತು ಇಲ್ಲಿದೆ ಮಾಹಿತಿ