ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿ ಹಾಗು ಬೈಕ್ ಮಧ್ಯ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.ಮೃತ ಸವಾರರನ್ನು ಆಕಾಶ್ (22) ಶಂಕರ್ (45) ಎಂದು ತಿಳಿದುಬಂದಿದೆ.
ಇವರು ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮದ ನಿವಾಸಿಗಳು ಎನ್ನಲಾಗಿದ್ದು, ಇವರು ಇಂದು ಸಕಲೇಶಪುರ ಪಟ್ಟಣದಲ್ಲಿ ನಡೆಯುತ್ತಿರುವ ಸಕಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಮುಗಿಸಿ ವಾಪಸ್ ಸ್ವಗ್ರಾಮಕ್ಕೆ ತೆರಳುವ ವೇಳೆ ಹಿಂಬದಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯ ಮತ್ತು ಅತೀ ವೇಗವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.