ಬೆಂಗಳೂರು: ರಾಜ್ಯ ಬಿಜೆಪಿ ನಿಯೋಗವು ಮಾನ್ಯ ಮುಖ್ಯಮಂತ್ರಿಗಳನ್ನು 28.02.2025 ರಂದು ಭೇಟಿ ಮಾಡಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ , ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಬೆಂಗಳೂರು ಕೇಂದ್ರ ಸಂಸದರಾದ ಪಿ.ಸಿ ಮೋಹನ್, ಬೆಂಗಳೂರು ದಕ್ಷಿಣ ಸಂಸದರು ಹಾಗೂ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ, ಬೆಂಗಳೂರಿನ ಶಾಸಕರುಗಳು, ವಿಧಾನ ಪರಿಷತ್‍ನ ಸದಸ್ಯರು, ರಾಜ್ಯ ಸಭಾ ಸದಸ್ಯರು , 3 ಜಿಲ್ಲೆಗಳ ಅಧ್ಯಕ್ಷರು ಭಾಗಿಯಾಗಿಲದ್ದಾರೆ.
ಇವರಲ್ಲದೇ ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥನಾರಾಯಣ್ ಅವರು ಈ ನಿಯೋಗದಲ್ಲಿ ಇರುವರು. ನಾಳೆ 28.02.2025ರ ಬೆಳಿಗ್ಗೆ 10.30 ಗಂಟೆಗೆ ಕುಮಾರ ಕೃಪಾ ಅತಿಥಿ ಗೃಹ ದಲ್ಲಿ ಸಭೆ ಸೇರಿ, ನಂತರ ಮಾನ್ಯ ಮುಖ್ಯ ಮಂತ್ರಿಗಳ ಕಾವೇರಿ ನಿವಾಸಕ್ಕೆ ಬೆಳಿಗ್ಗೆ 11.00 ಗಂಟೆಗೆ ಭೇಟಿ ನೀಡಲಿದ್ದಾರೆ.
BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ನೋಂದಣಿ ಕುರಿತು ಇಲ್ಲಿದೆ ಮಾಹಿತಿ