ಬೆಂಗಳೂರು : ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನ ಇಂಜಿನ್ ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದ್ದು ಕಾರಿನಲ್ಲಿದ್ದ ಚಾಲಕ ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.
ಬೆಂಗಳೂರಿನ ಅತ್ತಿಬೆಲೆ ಗುಡಿ ಗೋಪುರದ ಬಳಿ ಹುಂಡೈ i20 ಕಾರು ಹೊತ್ತಿ ಉರಿದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಬಳಿ ಚೆನ್ನೈ ಮೂಲದ ಶಂಕರ್ ಗೆ ಒಂದು i20 ಹುಂಡೈ ಕಾರು ಸೇರಿತ್ತು. ಇಂಜಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಚಾಲಕ ಕೂಡಲೇ ಕೆಳಗೆ ಇಳಿದಿದ್ದಾನೆ.
ಕ್ಷಣಾರ್ಧದಲ್ಲಿ ಇಡೀ ಕಾರಿಗೆ ಬೆಂಕಿ ಹಾಕಿ ಕೆನ್ನಾಲಿಗೆ ಆವರಿಸಿದೆ. TN 06 CE 3143 ನಂಬರ್ ಕಾರು ಬೆಂಕಿಗೆ ಆಹುತಿ ಆಗಿದೆ. ಕೂಡಲೇ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಸಿ ಬೆಂಕಿ ನಂದಿಸಿದೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ