ಮಂಡ್ಯ : ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದರು ಸಹ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಾಟ ತಪ್ಪಿಲ್ಲ. ಇದೀಗ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಹಳ್ಳಿ ಎಂಬ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.
ಮಳವಳ್ಳಿ ತಾಲೂಕಿನ ಸಾಹಳ್ಳಿ ಗ್ರಾಮದಲ್ಲಿ ಸಾಲದ ಹೊರೆ ತಾಳಲಾರದೆ ರೈತ ಸುಬ್ಬೇಗೌಡ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.3 ಎಕರೆ ಜಮೀನು ಹೊಂದಿದ್ದ ಸುಬ್ಬೇಗೌಡ ವ್ಯವಸಾಯಕ್ಕಾಗಿ ಬ್ಯಾಂಕ್, ಸಹಕಾರ ಸಂಘ ಹಾಗೂ ಖಾಸಗಿಯಾಗಿ ಸುಮಾರು 5 ಲಕ್ಷ ಸಾಲ ಮಾಡಿದ್ದರು.
ಈ ಹಿನ್ನೆಲೆ ಸಾಲದ ಹೊರೆಯಿಂದ ಮನನೊಂದಿದ್ದ ಸುಬ್ಬೇಗೌಡ ಸೋಮವಾರ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು.ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.