ಬೆಂಗಳೂರು: ರಾಜ್ಯ ಸರ್ಕಾರದ ಸಭೆ, ಸಮಾರಂಭಗಳ ಆಯೋಜನೆಯಲ್ಲಿ ಕಡ್ಡಾಯವಾಗಿ ಶಿಷ್ಟಾಚರಗಳನ್ನು ಪಾಲಿಸಬೇಕು. ಒಂದು ವೇಳೆ ಪಾಲಿಸದೇ ಇದ್ದರೇ ಅಂತಹ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಆದೇಶ ಹೊರಡಿಸಿದ್ದು, ಅದರಲ್ಲಿ ಸರ್ಕಾರದ ಸಭೆ ಸಮಾರಂಭಗಳಿಗೆ ಜನ ಪ್ರತಿನಿಧಿಗಳನ್ನು ಆಹ್ವಾನಿಸುವಲ್ಲಿ ಅನುಸರಿಸಬೇಕಾದ ಶಿಷ್ಠಚಾರದ ಕುರಿತು ಸಮಗ್ರವಾದ ಮಾಹಿತಿಯನ್ನು, ಸರ್ಕಾರದ ಉಲ್ಲೇಖಿತ ಸುತ್ತೋಲೆಗಳನ್ವಯ ಹೊರಡಿಸಿದ್ದು ಇರುತ್ತದೆ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಕಡ್ಡಾಯವಾಗಿ ಸದರಿ ಮಾನದಂಡಗಳನ್ನು ಅನುಸರಿಸಲು ಈಗಾಗಲೇ ಆಯುಕ್ತಾಲಯ ವ್ಯಾಪ್ತಿಯ ಎಲ್ಲ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದು ಇರುತ್ತದೆ. ಆದರೂ ಸಹ ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಿಷ್ಟಾಚಾರವನ್ನು ಸಮರ್ಪಕವಾಗಿ ಪಾಲನೇ ಮಾಡದೇ ಇರುವ ಕುರಿತು ಪ್ರಕರಣಗಳು ಹಕ್ಕು ಬಾಧ್ಯತಾ ಸಮಿತಿಯಲ್ಲಿ ದಾಖಲಾಗುತ್ತಿವೆ. ಸರ್ಕಾರವು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲು ಅವಕಾಶಗಳಿರುತ್ತವೆ ಎಂದು ತಿಳಿಸಿದ್ದಾರೆ.
ಪ್ರಯುಕ್ತ, ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸರ್ಕಾರದ ಸಭೆ/ಸಮಾರಂಭಗಳಲ್ಲಿ ಉಲ್ಲೇಖಿತ ಸುತ್ತೋಲೆಗಳಂತೆ ಕಡ್ಡಾಯವಾಗಿ ಶಿಷ್ಟಚಾರವನ್ನು ತಪ್ಪದೇ ಪಾಲಿಸಲು ಅಗತ್ಯ ಕ್ರಮ ವಹಿಸುವಂತೆ ಮತ್ತೊಮ್ಮೆ ಸೂಚಿಸಿದ್ದಾರೆ.
ಸರ್ಕಾರಿ ಸೌಲಭ್ಯ ಬಳಸಿಕೊಂಡು ಉತ್ತಮ ಕೃಷಿಕರಾಗಲು ರೈತರಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕಿವಿಮಾತು
ದಾಸರಹಳ್ಳಿ ವಲಯದ ‘IKEA’ಗೆ ಬಿಬಿಎಂಪಿ ಶಾಕ್: ಬರೋಬ್ಬರಿ ’65 ಲಕ್ಷ ದಂಡ’ ಸಮೇತ ಶುಲ್ಕ ವಸೂಲಿ