ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಬಸ್ ನಿಲ್ದಾಣದಲ್ಲಿ ರಸ್ತೆ ದಾಟುತ್ತಿದ್ದಂತ ಮಹಿಳೆಯೊಬ್ಬರ ಮೇಲೆಯೇ ಬಿಎಂಟಿಸಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳು ಮಹಿಳೆ ಲಿಂಗಮ್ಮ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವಂತ ಲಿಂಗಮ್ಮ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.