ಬೆಂಗಳೂರು : ಈ ಬಾರಿಯ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪರೀಕ್ಷಾ ದಿನಗಳಂದು ಉಚಿತ ಕೆಎಸ್ ಆರ್ ಟಿಸಿ ಬಸ್ ಸೇವೆ ಒದಗಿಸಲು ಆದೇಶಿಸಲಾಗಿದೆ.
ಹೌದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.