ಚಿತ್ರದುರ್ಗ : ಉರುಸ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಓರ್ವನಿಗೆ ಚಾಕು ಇರಿದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ. ಈ ಬೆಳೆ ಗಲಾಟೆಯನ್ನು ತಡೆಯಲು ಹೋಗಿದ್ದ ಇಬ್ಬರು ಕಾನ್ಸ್ಟೇಬಲ್ ಸೇರಿದಂತೆ ಒಟ್ಟು ನಾಲ್ವರಿಗೆ ಈ ಒಂದು ಘರ್ಷಣೆಯಲ್ಲಿ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ದೊಡ್ಡೇರಿ ಗ್ರಾಮದಲ್ಲಿ ನಿನ್ನೆ ರಾತ್ರಿ ಗರಿಬಿಸಾವೇ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ.ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ದೊಡ್ಡೇರಿ ಗ್ರಾಮದಿಂದ ಚಳ್ಳಕೆರೆ ಪಟ್ಟಣದವರೆಗೆ ಈ ಒಂದು ಮೆರವಣಿಗೆ ನಡೆದಿದೆ. ಮೆರವಣಿಗೆ ಸಂದರ್ಭದಲ್ಲಿ ನಿನ್ನೆ ರಾತ್ರಿ ಉರುಸ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ.
ಮೆರವಣಿಗೆ ವೇಳೆ ಯುವಕರಿಗೆ ಬ್ಲೆಡ್ ನಿಂದ ಇರಿದು ಹಲ್ಲೆ ನಡೆಸಲಾಗಿದೆ. ಗಾಯಾಳು ಅಜ್ಗರ್ ಗೆ ಚಿತ್ರದುರ್ಗದ ಜಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬ ಗಾಯಾಳು ಮುಸ್ತಫಾ ಚಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘರ್ಷಣೆ ತಡೆಯಲು ಹೋದಾಗ ಪೊಲೀಸರ ಮೇಲು ಹಲ್ಲೆ ನಡೆಸಲಾಗಿದೆ.
ಪೊಲೀಸ್ ಕಾನ್ಸ್ಟೇಬಲ್ ವೆಂಕಟೇಶ ಹಾಗೂ ಲೋಕೇಶ್ ಗು ಈ ವೇಳೆ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ವೆಂಕಟೇಶ್ ಮತ್ತು ಲೋಕೇಶ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಉರುಸ್ ಬೆಳೆ ಗುಂಪು ಘರ್ಷಣೆಗೆ ಕಾರಣ ಏನೆಂಬುದು ಇನ್ನುವರೆಗೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿ ಬೈ ಎಸ್ ಪಿ ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.