ಬೆಂಗಳೂರು : ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಇಂದು ಅಪರೂಪದ ರೋಗಗಳ ದಿನ. ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಹೆಚ್ಚಾಗಿ ಮಕ್ಕಳಲ್ಲಿ ಈ ಕಾಯಿಲೆಗಳು ಕಾಣಿಸಿಕೊಂಡಿವೆ. ಈ ಅಪರೂಪದ ರೋಗಗಳು ಮತ್ತು ರೋಗ ಪೀಡಿತರ ಜೀವನದ ಮೇಲೆ ಅವುಗಳ ಪರಿಣಾಮದ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇಂದು ಅಪರೂಪದ ರೋಗಗಳ ದಿನ. ವಿಶ್ವದಲ್ಲಿ ಸುಮಾರು 300 ಮಿಲಿಯನ್ ಜನರು ಅಪರೂಪದ ಕಾಯಿಲೆಗಳಿಗೆ ತುತ್ತಾಗಿದ್ದಾರೆ. ಹೆಚ್ಚಾಗಿ ಮಕ್ಕಳಲ್ಲಿ ಈ ಕಾಯಿಲೆಗಳು ಕಾಣಿಸಿಕೊಂಡಿವೆ. ಈ ಅಪರೂಪದ ರೋಗಗಳು ಮತ್ತು ರೋಗ ಪೀಡಿತರ ಜೀವನದ ಮೇಲೆ ಅವುಗಳ ಪರಿಣಾಮದ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶ.#RareDiseaseDay2025 pic.twitter.com/quQ4s9TdXG
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 28, 2025