ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬಿಎಂಟಿಸಿ ಬಸ್ ಗಳ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಹನುಮಂತನಗರದ ಸೀತಾ ಸರ್ಕಲ್ ಬಳಿ 2 ಬಿಎಂಟಿಸಿ ಬಸ್ ಗಳ ನಡುವೆ ಸಿಲುಕಿ ಆಟೋ ಅಪ್ಪಚ್ಚಿಯಾಗಿದ್ದು, ಆಟೋದಲ್ಲಿದ್ದ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.