ಬೆಂಗಳೂರು : ಬೆಂಗಳೂರು: ಬೆಳಗಾವಿಯಲ್ಲಿ ಸಾರಿಗೆ ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದರು. ಇದನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿಯೇ ಖಂಡಿಸಿದ್ದವು. ಈ ಬೆನ್ನಲ್ಲೇ ಇಂತಹ ಘಟನೆ ಖಂಡಿಸಿ ಮಾರ್ಚ್.22ಕ್ಕೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದಾವೆ.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಮರಾಠಿಗರ ಪುಂಡಾಟಿಕೆ ಹೆಚ್ಚಾಗಿದೆ. ಅಲ್ಲದೇ ಕರ್ನಾಟಕದ ಬಸ್ ಗಳಿಗೆ ಮಸಿ ಕೂಡ ಬಳಿಯಲಾಗಿದೆ. ಈ ಎಲ್ಲವನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದಾವೆ.ಬೆಳಗಾವಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲಿನ ಹಲ್ಲೆ, ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ಖಂಡಿಸಿ ಮಾರ್ಚ್.22ರಂದು ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಸಂಘಟನೆಗಳು ಘೋಷಿಸಿವೆ.
ಈ ಸಂಬಂಧ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮಹತ್ವದ ಸಭೆ ಕೂಡ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 22ರಂದು ಕರ್ನಾಟಕ ಬಂದ್ ಫಿಕ್ಸ್ ಆದಂತೆ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಬೇಕಿದೆ.
ಮಾರ್ಚ್ ನಲ್ಲಿ ಸಾಲು ಸಾಲು ಪ್ರತಿಭಟನೆ ಹೋರಾಟಗಳು ಇವೆ. ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಘಟನೆಗೆ ಸಂಬಂಧಿಸಿದಂತೆ, ಮಾರ್ಚ್ 3 ರಿಂದ ಮಾರ್ಚ್ 22 ರ ವರೆಗೂ ಬೃಹತ್ ಹೋರಾಟ ನಡೆಯಲಿದೆ. ಮಾರ್ಚ್ 3ರಂದು ರಾಜಭವನ ಮುತ್ತಿಗೆ ಹಾಕಲು ನಿರ್ಧಾರ ಕೈಗೊಳ್ಳಲಾಗಿದ್ದು, ಮಾರ್ಚ್ 7 ರಂದು ಬೆಳಗಾವಿ ಚಲೋಗೆ ಕನ್ನಡಿಗರು ನಿರ್ಧರಿಸಿದ್ದಾರೆ. ಮಾರ್ಚ್ 11 ರಂದು ಅತ್ತಿಬೆಲೆ ಗಡಿ ಬಂದ್ ಗೆ ನಿರ್ಧರಿಸಿದ್ದಾರೆ. ಅಲ್ಲದೆ ಮಾರ್ಚ್ 16ರಂದು ಹೊಸಕೋಟೆ ಟೋಲ್ ಬಂದ್ ಮಾಡಲಾಗುತ್ತಿದೆ. ಮೇಕೆದಾಟು ಯೋಜನೆ ಜಾರಿಗಾಗಿ ಬಂದ್ ಗೆ ಕರೆ ನೀಡಲಾಗಿದೆ. ಇನ್ನು ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ.
ಮಾ. 22 ರಂದು ಏನಿರುತ್ತೆ ಏನಿರಲ್ಲ?
ಮಾರ್ಚ್ 22 ರಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ಅವರು ಅಂದು ಹೋಟೆಲ್ಗಳನ್ನು ಮುಚ್ಚಬೇಕು. ಹೋಟೆಲ್ ಸಿನಿಮಾ ಥಿಯೇಟರ್ ಗಳು ಬಾಗಿಲುಗಳನ್ನು ಬಂದ್ ಮಾಡಬೇಕು. ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳನ್ನು ಕೂಡ ಬಂದ್ ಮಾಡಬೇಕು. 22ರಂದು ಸಾರಿಗೆ ಬಸ್ ಸಂಚಾರ ನಿಲ್ಲಿಸಬೇಕು. ಅಲ್ಲದೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ನಮ್ಮ ಬಂದ್ ಗೆ ಸಹಕಾರ ನೀಡಬೇಕು.
ಸಿಎಂ ಸಿದ್ದರಾಮಯ್ಯ ಕೂಡ ಹೋರಾಟವನ್ನು ಬೆಂಬಲಿಸಬೇಕು. ಓಲಾ, ಉಬರ್, ಆಟೋ ಹಾಗು ಲಾರಿಗಳ ಸಂಚಾರಗಳನ್ನು ನಿಲ್ಲಿಸಬೇಕು. ಮಾಲ್ ನವರು ಈಗಾಗಲೇ ಬಂದ್ಗೆ ಸಹಕಾರ ನೀಡಿದ್ದಾರೆ. ಇನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ಆಸ್ಪತ್ರೆಗಳು ಮೆಡಿಕಲ್ ಶಾಪ್ ಗಳು ತೆರೆಯುವ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕನ್ನಡ ಪರ ಹೋರಾಟಗಾರ ವಾಟಳ್ ನಾಗರಾಜ್ ಹೇಳಿಕೆ ನೀಡಿದರು.