ಬೆಂಗಳೂರು: ಬೆಳಗಾವಿಯಲ್ಲಿ ಸಾರಿಗೆ ಬಸ್ ನಿರ್ವಾಹಕನ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ್ದರು. ಇದನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿಯೇ ಖಂಡಿಸಿದ್ದವು. ಈ ಬೆನ್ನಲ್ಲೇ ಇಂತಹ ಘಟನೆ ಖಂಡಿಸಿ ಮಾರ್ಚ್.22ಕ್ಕೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದಾವೆ.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಮರಾಠಿಗರ ಪುಂಡಾಟಿಕೆ ಹೆಚ್ಚಾಗಿದೆ. ಅಲ್ಲದೇ ಕರ್ನಾಟಕದ ಬಸ್ ಗಳಿಗೆ ಮಸಿ ಕೂಡ ಬಳಿಯಲಾಗಿದೆ. ಈ ಎಲ್ಲವನ್ನು ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದಾವೆ.
ಬೆಳಗಾವಿಯಲ್ಲಿ ಸಾರಿಗೆ ಬಸ್ ಕಂಡಕ್ಟರ್ ಮೇಲಿನ ಹಲ್ಲೆ, ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ಖಂಡಿಸಿ ಮಾರ್ಚ್.22ರಂದು ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡಪರ ಸಂಘಟನೆಗಳು ಘೋಷಿಸಿವೆ.
ಈ ಸಂಬಂಧ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳಿಂದ ಮಹತ್ವದ ಸಭೆ ಕೂಡ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಮಾರ್ಚ್ 22ರಂದು ಕರ್ನಾಟಕ ಬಂದ್ ಫಿಕ್ಸ್ ಆದಂತೆ ಆಗಿದೆ. ಈ ಬಗ್ಗೆ ಅಧಿಕೃತ ಘೋಷಣೆ ಹೊರಬೀಳಬೇಕಿದೆ.
BREAKING : ಚಿಕ್ಕಬಳ್ಳಾಪುರಲ್ಲಿ ಭೀಕರ ಮರ್ಡರ್ : ಕ್ಷುಲ್ಲಕ ಕಾರಣಕ್ಕೆ ಬಾರ್ ಸಪ್ಲೈಯರ್ ನನ್ನು ಕೊಂದ ದುಷ್ಕರ್ಮಿಗಳು
BREAKING: ಉತ್ತರಾಖಂಡದ ಬದರೀನಾಥ್ ಬಳಿ ಭಾರೀ ಹಿಮಪಾತ: ಹಿಮದಡಿ 57 ಕಾರ್ಮಿಕರು ಸಿಲುಕಿರುವ ಶಂಕೆ