ಬೆಂಗಳೂರು: ನಟ ದರ್ಶನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ಎನ್ನುವಂತೆ ಬೆಂಗಳೂರು ಬಿಟ್ಟು ಹೋಗದಂತೆ ವಿಧಿಸಿದ್ದಂತ ಷರತ್ತು ಸಡಿಲಗೊಳಿಸಿದೆ. ಈ ಮೂಲಕ ದೇಶಾದ್ಯಂತ ಸಂಚಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿತ್ತು. ಅದರಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳದಂತೆ ಷರತ್ತು ವಿಧಿಸಿತ್ತು.
ಈ ಷರತ್ತು ಸಡಿಲಿಕೆ ಮಾಡುವಂತೆ ನಟ ದರ್ಶನ್ ಹೈಕೋರ್ಟ್ ಗೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿರುವಂತ ಹೈಕೋರ್ಟ್ ನ್ಯಾಯಪೀಠವು ದೇಶಾಧ್ಯಂತ ಸಂಚಾರಕ್ಕೆ ಅವಕಾಶ ನೀಡಿದೆ. ಆದರೇ ವಿದೇಶಕ್ಕೆ ತೆರಳೋದಕ್ಕೆ ಕೋರ್ಟ್ ಅನುಮತಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.
ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಪ್ರೆಗ್ನೆಂಟ್: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ದಂಪತಿ