ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟದ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ. ಮಾರ್ಚ್.3ರಿಂದ 22ರವರೆಗೆ ಸಾಲು ಸಾಲು ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.
ಇಂದು ಈ ಸಂಬಂಧ ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು. ಮಾರ್ಚ್.3ರಿಂದ 22ರವರೆಗೆ ರಾಜ್ಯದಲ್ಲಿ ಎಂಇಎಸ್ ಪುಂಡಾಟ ವಿರೋಧಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದರು.
ಮಾರ್ಚ್ 3ರಿಂದ 22ರವರೆಗೆ ಬೃಹತ್ ಹೋರಾಟ ಮಾಡಲಿದ್ದೇವೆ. ಮಾರ್ಚ್.3ರಂದು ರಾಜಭವನಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಕೈಗೊಂಡಿದ್ದೇವೆ. ಮಾರ್ಚ್.7ರಂದು ಬೆಳಗಾವಿ ಚಲೋಗೆ ಕನ್ನಡಿಗರು ಸಜ್ಜಾಗಲಿದ್ದಾರೆ ಎಂದು ತಿಳಿಸಿದರು.
ಮಾರ್ಚ್.11ರಂದು ಅತ್ತಿಬೆಲೆ ಗಡಿ ಬಂದ್ ಗೆ ನಿರ್ಧರಿಸಲಾಗಿದೆ. ಮಾರ್ಚ್.16ರಂದು ಹೊಸಕೋಟೆ ಟೋಲ್ ಬಂದ್ ಮಾಡಿ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಲಿದ್ದೇವೆ ಎಂದರು.
ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಗೆ ನಿರ್ಧರಿಸಲಾಗಿದೆ. ಅಂದು ಹೋಟೆಲ್, ಅಂಗಡಿ ಮುಂಗಟ್ಟುಗಳು, ಸಾರಿಗೆ ಸಂಚಾರ ಬಂದ್ ಆಗಲಿದೆ. ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಇರಲಿದೆ ಎಂದರು.
ಬೆಂಗಳೂರಲ್ಲಿ ಮಾರ್ಚ್.22ರಂದು ಟೌನ್ ಹಾಲ್ ನಿಂದ ಪ್ರತಿಭಟನೆ ನಡೆಯಲಿದೆ. ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂಬುದಾಗಿ ತಿಳಿಸಿದರು.
‘ನಟ ದರ್ಶನ್’ಗೆ ಹೈಕೋರ್ಟ್ ಬಿಗ್ ರಿಲೀಫ್: ಬೆಂಗಳೂರು ಬಿಟ್ಟು ಹೋಗದಂತೆ ವಿಧಿಸಿದ್ದ ಷರತ್ತು ಸಡಿಲಿಕೆ | Actor Darshan
BREAKING : ಚಿಕ್ಕಬಳ್ಳಾಪುರಲ್ಲಿ ಭೀಕರ ಮರ್ಡರ್ : ಕ್ಷುಲ್ಲಕ ಕಾರಣಕ್ಕೆ ಬಾರ್ ಸಪ್ಲೈಯರ್ ನನ್ನು ಕೊಂದ ದುಷ್ಕರ್ಮಿಗಳು