ನವದೆಹಲಿ : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ಬಿಎಸ್ ಯಡಿಯೂರಪ್ಪ ವಿರುದ್ಧ ಕುರಿತ ಪ್ರಕರಣಗಳ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ನ್ಯಾ.ಪರ್ದಿವಾಲ ನ್ಯಾ.ಮನೋಜ್ ಸಿನ್ಹ ನೇತೃತ್ವದ ಸುಪ್ರೀಂಕೋರ್ಟ್ ಪೀಠ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಿ ಅದೇಶಿಸಲಾಯಿತು.
ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ಗಳು ದಾಖಲಾಗಿವೆ. ಪ್ರಕರಣಗಳಿಗೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದ್ದು ನ್ಯಾ.ಪರ್ದಿವಾಲ ನ್ಯಾ.ಮನೋಜ್ ಸಿನ್ಹ ಅವರಿದ್ದ ಸುಪ್ರೀಂಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಿತು.ವಿಚಾರಣೆ ವೇಳೆ ವಾದ ಪ್ರತಿವಾದ ಆಲಿಸಿದ ಬಳಿಕ ಮಾರ್ಚ್ 6ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್ ನ್ಯಾ.ಪರ್ದಿವಾಲ ನ್ಯಾ.ಮನೋಜ್ ಸಿನ್ಹ ನೇತೃತ್ವದ ಪೀಠದಿಂದ ಆದೇಶ ಹೊರಡಿಸಲಾಗಿದೆ.