ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಲ್ಲಿ ಒಂದು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂಬುದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಮೊದಲ ಆದೇಶವೊಂದು ಹೊರಬಿದ್ದಿದೆ. ಅದೇನು ಅಂತ ಮುಂದೆ ಓದಿ.
ದಿನಾಂಕ: 1.4.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಡಿಫೈನ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿ ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಸರ್ಕಾರಿ ಆದೇಶವನ್ನು ಹೊರಡಿಸಲಾಗಿರುತ್ತದೆ. ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ: 30.6.2024 ರೊಳಗೆ ಅಭಿಮತವನ್ನು ಪಡೆದು ಕ್ರೋಢೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿತ್ತು ಎಂದಿದ್ದಾರೆ.
ಮುಂದುವರೆದು ದಿನಾಂಕ: 24.1.2024 ರ ಸರ್ಕಾರಿ ಆದೇಶದನ್ವಯ ಡಿಫೆನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್.ಪಿ.ಎಸ್. ಪ್ರಾನ್ ಖಾತೆಯಲ್ಲಿ ಜಮೆಯಾಗಿರುವ ಸರ್ಕಾರದ ಹಾಗೂ ನೌಕರರ ವಂತಿಗೆಗಳನ್ನು ಹಿಂಪಡೆದು ಇತ್ಯರ್ಥಪಡಿಸಲು ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.
ಅದರಂತೆ, ದಿನಾಂಕ: 24.1.2024 ರ ಸರ್ಕಾರಿ ಆದೇಶದನ್ವಯ ಸಂಬಂಧಿತ ಅಧಿಕಾರಿ/ನೌಕರರು ಚಲಾಯಿಸಿದ ಅಭಿಮತವನ್ನು ಪರಿಶೀಲಿಸಿದ ಸರ್ಕಾರವು ದಿನಾಂಕ: 01.04.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ರಾಷ್ಟ್ರೀಯ ಪಿಂಚಣಿ ಯೋಜನೆಗೊಳಪಟ್ಟ ಅಧಿಕಾರಿ/ನೌಕರರನ್ನು ಹಳೆಯ ಡಿಫೆನ್ ಪಿಂಚಣಿ ಯೋಜನೆಗೆ ಒಳಪಡಿಸಲು ತೀರ್ಮಾನಿಸಿ ಈ ಕಳಕಂಡಂತ ಆದೇಶಿಸಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪಿಂಚಣಿ ಯೋಜನೆಗೊಳಪಟ್ಟ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಈ ಕೆಳಕಂಡ ಅಧಿಕಾರಿ/ನೌಕರರು ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿರುವುದರಿಂದ ದಿನಾಂಕ: 24.1.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್ /99/2023 ರನ್ವಯ ಅವರನ್ನು ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಿ ಆದೇಶಿಸಿದೆ. ಸದರಿ ಅಧಿಕಾರಿ / ನೌಕರರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ನಿಯಮ 2-C ಅನ್ವಯವಾಗುವುದಿಲ್ಲ ಮತ್ತು ಇವರಿಗೆ ಅದೇ ನಿಯಮಾವಳಿಯ ನಾಲ್ಕನೇಯ ಅಧ್ಯಾಯ ಅನ್ವಯವಾಗತಕ್ಕದ್ದು ಎಂದು ತಿಳಿಸಿದ್ದಾರೆ.
ಬೆಂಗಳೂರಿನ ‘ಕೇಕ್ ಪ್ರಿಯ’ರಿಗೆ ನೆಮ್ಮದಿಯ ಸುದ್ದಿ: ‘ಕೃತಕ ಬಣ್ಣ’ದ ಪ್ರಮಾಣ ಇಳಿಕೆ
BREAKING : ಚಿಕ್ಕಬಳ್ಳಾಪುರಲ್ಲಿ ಭೀಕರ ಮರ್ಡರ್ : ಕ್ಷುಲ್ಲಕ ಕಾರಣಕ್ಕೆ ಬಾರ್ ಸಪ್ಲೈಯರ್ ನನ್ನು ಕೊಂದ ದುಷ್ಕರ್ಮಿಗಳು